ಕಲಬುರಗಿ: ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 78 ವರ್ಷದ ವೃದ್ಧೆ ಜಗದೇವಿ ಲಾಳಿ ಅವರನ್ನು ಕಬ್ಬಿಣದ ರಾಡ್‌ನಿಂದ ತೀವ್ರ ಹಲ್ಲೆ ಮಾಡಿ ಕೊಲೆ ಮಾಡಿರುವ ಪ್ರಕರಣದಲ್ಲಿ ಓರ್ವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ಐವರು ಆರೋಪಿಗಳನ್ನು ಜಿಲ್ಲಾ ಪೊಲೀಸ್‌ವಲಯದ ತನಿಖಾ ತಂಡ ಬಂಧಿಸಿದೆ. ಬಂಧಿತರಿಂದ ಬಂಗಾರದ ಆಭರಣ ಹಾಗೂ ₹5,500 ನಗದುವನ್ನು ಜಪ್ತಿ ಮಾಡಲಾಗಿದೆ.
ಜಿಲ್ಲಾ ಪೊಲೀಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಪಿ ಅದ್ದೂರು ಶ್ರೀನಿವಾಸಲು, ಪೇಠಶಿರೂರ ಗ್ರಾಮದ ತಾನಾಜಿ ಬಂಡಗಾರ (25), ವಿಜಯಕುಮಾರ್ ಕರೆಗೋಳ (23), ಸಂಜೀವ್ ಕುಮಾರ್ ಕರೆಗೋಳ (25), 17 ವರ್ಷದ ಬಾಲಕ ಹಾಗೂ ಅಲ್ಲಿಹಾಳ ಗ್ರಾಮದ ಲಕ್ಷ್ಮಣ ತಳವಾರ (24) ಬಂಧಿತ ಆರೋಪಿಗಳಾಗಿದ್ದಾರೆ ಎಂದರು.
ಮೃತಜೆಯ ಶವವು ಪೇಠಶಿರೂರ ಗ್ರಾಮದ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಘಟನೆಯ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರಿಗೆ ಸಾವಿನ ಬಗ್ಗೆ ಅನುಮಾನ ಉಂಟಾಗಿದ್ದರಿಂದ ವಿಶೇಷ ತನಿಖಾ ತಂಡ ರಚಿಸಿ ಪ್ರಕರಣ ಬಗೆಹರಿಸಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಮಹೇಶ್ ಮೇಘಣ್ಣವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐ ಜಗದೇವಪ್ಪ ಪಾಳಾ, ಇಎಸ್‌ಐ ಗೌತಮ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.