ಜಿಲ್ಲೆ ರಾಜ್ಯ ದೇಶ ವಿದೇಶ ಪ್ರಮುಖ ಸುದ್ದಿ ಎಐ (AI) ಶಿಕ್ಷಣ ಕೃಷಿ ಆರೋಗ್ಯ ಉದ್ಯೋಗ ಸಂಪಾದಕೀಯ ಜೀವನಶೈಲಿ ಕ್ರೀಡೆ ಮನರಂಜನೆ

---Advertisement---

ಸೆ.6ರಂದು ಆಳಂದ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ.

On: September 4, 2025 8:29 PM

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದಆಳಂದ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಬಸ್ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಸೆ.6 ರಂದು ಶನಿವಾರ ಮಧ್ಯಾಹ್ನ 1 ಗಂಟೆಗೆ ಆಳಂದ ಕೇಂದ್ರ ಬಸ್‌ ನಿಲ್ದಾಣದಲ್ಲಿ ರಾಜ್ಯದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ನಂತರ ಆಳಂದ ವೀರಶೈವ ಲಿಂಗಾಯತ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ಹಾಗೂ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಗೌರವ ಉಪಸ್ಥಿತಿವಹಿಸುವರು. ರಾಜ್ಯದ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವರಾದ ಬೈರತಿ ಸುರೇಶ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್‌ ಆರ್. ಪಾಟೀಲ್, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಝ್ ಫಾತೀಮಾ ಹಾಗೂ ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂ‌ರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದ‌ರ್ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ವಿಧಾನ ಪರಿಷತ್‌ ಶಾಸಕರುಗಳಾದ ಸುನೀಲ್‌ ವಲ್ಲಾಪುರೆ, ಶಶೀಲ ಜಿ.ನಮೋಶಿ, ಡಾ.ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಡಾ.ತಳವಾರ ಸಾಬಣ್ಣ ಜಗದೇವ ಗುತ್ತೇದಾರ್, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಸ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಆಳಂದ ಪುರಸಭೆ ಅಧ್ಯಕ್ಷೆ ಫಿರ್ದೋಸ್ ಅನ್ಸಾರಿ ಅತಿಥಿಗಳಾಗಿ ಪಾಲ್ಗೊಳ್ಳುವರು.

ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ, ಬೆಂಗಳೂರಿನ ನಗರ ಭೂ ಸಾರಿಗೆ ನಿರ್ದೆಶನಾಲಯದ ಆಯುಕ್ತ ದೀಪಾ ಚೋಳನ್, ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡಿರು ಶ್ರೀನಿವಾಸುಲು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಬಿ. ಸುಶೀಲಾ, ಮುಖ್ಯ ಕಾಮಗಾರಿ ಅಭಿಯಂತರ ಚೆನ್ನಣ್ಣ ಬೋರಯ್ಯ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲಬುರಗಿ ವಿಭಾಗ-2ರ ವಿಭಾಗೀಯ ನಿಯಂತ್ರಣಾಧಿಕಾರಿ ಸುನಿಲ್ ಕುಮಾರ ಚಂದರಗಿ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Join WhatsApp

Join Now

Leave a Comment

error: Content is Protected!