ಜಿಲ್ಲೆ ರಾಜ್ಯ ದೇಶ ವಿದೇಶ ಪ್ರಮುಖ ಸುದ್ದಿ ಎಐ (AI) ಶಿಕ್ಷಣ ಕೃಷಿ ಆರೋಗ್ಯ ಉದ್ಯೋಗ ಸಂಪಾದಕೀಯ ಜೀವನಶೈಲಿ ಕ್ರೀಡೆ ಮನರಂಜನೆ

---Advertisement---

ಆಳಂದ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆ.

On: November 26, 2025 4:44 PM

ಆಳಂದ: ಮತಕ್ಷೇತ್ರದ ಕಾಂಗ್ರೆಸ್ ಮುಖಂಡರು ಮಂಗಳವಾರ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಕಲಬುರಗಿಯ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ತಾಲೂಕಿನ ತಂಬಾಕವಾಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್. ಪಾಟೀಲ, ಬೋಳಣಿ ಗ್ರಾಮದ ಯುವ ಮುಖಂಡ ರಮೇಶ್ ಬಿರಾದಾರ ಕಾಂಗ್ರೆಸ್ ತೊರೆದು ವಿರೋಧ ಪಕ್ಷದ ನಾಯಕ ಆರ್. ಅಶೋಕ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ ಅವರ ಸಮ್ಮುಖದಲ್ಲಿ ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಅಶೋಕ ಬಗಲಿ, ಮಾಜಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಮಾಜಿ ಅಧ್ಯಕ್ಷ ಆನಂದರಾವ ಪಾಟೀಲ, ಜಿಲ್ಲಾ ಮುಖಂಡ ಸಂತೋಷ ಹಾದಿಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Join WhatsApp

Join Now

Leave a Comment

error: Content is Protected!