ಜಿಲ್ಲೆ ರಾಜ್ಯ ದೇಶ ವಿದೇಶ ಪ್ರಮುಖ ಸುದ್ದಿ ಎಐ (AI) ಶಿಕ್ಷಣ ಕೃಷಿ ಆರೋಗ್ಯ ಉದ್ಯೋಗ ಸಂಪಾದಕೀಯ ಜೀವನಶೈಲಿ ಕ್ರೀಡೆ ಮನರಂಜನೆ

---Advertisement---

ಬಿಜೆಪಿ ಪಕ್ಷ ಸಂಘಟಿಸಿ ಚುನಾವಣೆಗೆ ಸಜ್ಜಾಗಿ: ವಿಜಯೇಂದ್ರ.

On: September 19, 2025 7:12 PM

ಆಳಂದ: ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸಿ ಮುಂಬರುವ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಿ, ಅಭ್ಯರ್ಥಿಗಳನ್ನು ಗೆಲ್ಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಪಟ್ಟಣದ ಎಸ್‌ಆರ್‌ಜಿ ಕಾಂಪ್ಲೆಕ್ಸ್‌ ಬಳಿಯ ತಾಲೂಕು ಬಿಜೆಪಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿ ಯೋಜನೆಗಳ ಹೆಸರಿನಲ್ಲಿ ಸಮಯ ವ್ಯರ್ಥ ಮಾಡುತ್ತಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ರೈತಪರ, ಜನಪರ ಯೋಜನೆಗಳನ್ನು ಜಾರಿಗೆ ತಂದುದು. ಆದರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಿಂದುಳಿದವರ ಹೆಸರಿನಲ್ಲಿ ಹಿಂದೂಗಳನ್ನು ಒಡೆದು ಆಡಳಿತ ನಡೆಸುತ್ತಿದ್ದಾರೆ. ಇಂತಹ ಸರ್ಕಾರವನ್ನು ಉರುಳಿಸಲು ಕಾರ್ಯಕರ್ತರು, ಮುಖಂಡರು ಪಣ ತೊಡಬೇಕು. ಧೈರ್ಯದಿಂದ ಮುನ್ನಡೆಯುತ್ತಾ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಬೇಕು. ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಗುರಿ ಸಾಧಿಸಲು ಕ್ಷೇತ್ರದಲ್ಲೂ ಬಲಿಷ್ಠರಾಗಬೇಕು,” ಎಂದು ಹೇಳಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿ ಅಂಚಿಗೆ ತಲುಪಿಸಿದೆ. ಕಾರ್ಯಕರ್ತರು ಮುಂಬರುವ ಚುನಾವಣೆಗೆ ತಯಾರಿ ನಡೆಸಿ ಸಂಘಟಿತವಾಗಿ ಗೆಲುವು ಸಾಧಿಸಬೇಕು,” ಎಂದು ಒತ್ತಾಯಿಸಿದರು.

ಮಾಜಿ ಶಾಸಕ ಸುಭಾಷ ಗುತ್ತೇದಾರ ಮಾತನಾಡಿ, “ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳನ್ನು ಆಲಿಸಲು ಕಚೇರಿಯ ಅವಶ್ಯಕತೆ ಇತ್ತು. ಅದಕ್ಕಾಗಿ ರಾಜ್ಯಾಧ್ಯಕ್ಷರ ಮೂಲಕ ಕಚೇರಿಯನ್ನು ಉದ್ಘಾಟಿಸಲಾಗಿದೆ. ಜನರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ಅಥವಾ ಮೌಖಿಕವಾಗಿ ತಿಳಿಸಿದರೆ ನಿವಾರಣೆಗೆ ಪ್ರಯತ್ನಿಸಲಾಗುವುದು. ಕಾರ್ಯಕರ್ತರು ಎದುರಾಳಿಗಳಿಗೆ ಹೆದರದೆ ಕೆಲಸಮಾಡಬೇಕು. ಪಕ್ಷದ ಕಚೇರಿ ಸದಾ ಸಾರ್ವಜನಿಕರಿಗಾಗಿ ತೆರೆದಿರಲಿದೆ,” ಎಂದು ಹೇಳಿದರು.

ಜಿಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ಮಾತನಾಡಿ, “ಕ್ಷೇತ್ರದಲ್ಲಿ ತಂದೆ ಸುಭಾಷ ಗುತ್ತೇದಾರ ತಂದ ಅನುದಾನವನ್ನೇ ಈಗಿನ ಶಾಸಕರು ತಾವು ತಂದಂತೆ ಹೇಳಿಕೊಳ್ಳುತ್ತಿದ್ದಾರೆ. ಅಭಿವೃದ್ಧಿಯ ಬದಲು ಹಿಂಬಾಲಕರನ್ನು ಮುನ್ನೆಲೆಗೆ ತಂದು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಕ್ಷೇತ್ರದ ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ. ಈ ಕುರಿತು ಪಕ್ಷದ ಸಂಘಟಿತ ಹೋರಾಟಕ್ಕೆ ಎಲ್ಲರೂ ಕೈಜೋಡಿಸಬೇಕು,” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮುಡ್, ಎಂಎಲ್‌ಸಿ ಶಶೀಲ ನಮೋಶಿ, ಸಚಿನ್ ಕಲ್ಯಾಣ ಶೆಟ್ಟಿ, ಡಾ. ಶೈಲೇಂದ್ರ ಬೆಲ್ದಾಳ, ಈಶ್ವರಸಿಂಗ್ ಠಾಕೂರ್, ಸಿದ್ಧಲಿಂಗ ಪಾಟೀಲ, ಅಮರನಾಥ ಪಾಟೀಲ, ಕಲಬುರಗಿ ನಗರಾಧ್ಯಕ್ಷ ಚಂದು ಪಾಟೀಲ, ಗ್ರಾಮೀಣ ಅಧ್ಯಕ್ಷ ಅಶೋಕ ಬಗಲಿ, ನಿತೀನ್ ಗುತ್ತೇದಾರ, ತಾಲೂಕು ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ, ಮಾಜಿ ಅಧ್ಯಕ್ಷ ಆನಂದ ಪಾಟೀಲ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಮಾನೆ, ಬಾಬುಗೌಡ ಪಾಟೀಲ, ಅಶೋಕ ಹತ್ತರಕಿ, ಸಂತೋಷ ಗುತ್ತೇದಾರ, ಜಿಪಂ ಮಾಜಿ ಸದಸ್ಯ ವೀರಣ್ಣಾ ಮಂಗಾಣೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Join WhatsApp

Join Now

Leave a Comment

error: Content is Protected!