ಕಲಬುರಗಿ: ಜಿಲ್ಲಾದ್ಯಂತ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಪರಿಣಾಮವಾಗಿ ಕಮಲಾಪುರ ತಾಲೂಕಿನ ಕುದಮೂಡ ಗ್ರಾಮದಲ್ಲಿ ಜಾನುವಾರುಗಳು ಹಳ್ಳದ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿರುವ ದುರ್ಘಟನೆ ನಡೆದಿದೆ.
ಮಾಹಿತಿಯಂತೆ, ಕುದಮೂಡ ಗ್ರಾಮದ ಸೇತುವೆಯ ಮೂಲಕ ರೈತರು ತಮ್ಮ ಜಾನುವಾರುಗಳನ್ನು ಹೊಲದತ್ತ ಕರೆದೊಯ್ಯುವ ವೇಳೆ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇದರ ಜೊತೆಗೆ ಜಿಲ್ಲೆಯ ಹಲವು ಭಾಗಗಳಲ್ಲಿ ಮನೆಗಳ ಗೋಡೆಗಳು ಹಾಗೂ ಮೇಲ್ಛಾವಣಿಗಳು ಕುಸಿತಗೊಂಡಿದ್ದು, ಅಪಾರ ಆಸ್ತಿ ಹಾನಿ ಸಂಭವಿಸಿದೆ.
ನಿರಂತರ ಮಳೆಯ ಪರಿಣಾಮ ಜನತೆ ಆತಂಕಕ್ಕೆ ಒಳಗಾಗಿದ್ದು, ಹಾನಿ ಅಧೀಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆ ಕೈಗೊಳ್ಳಬೇಕೆಂಬ ಆಗ್ರಹ ಜಿಲ್ಲೆದೆಡೆಗಿಲ್ಲಿ ಕೇಳಿ ಬರುತ್ತಿದೆ.